ಶಿವಮೊಗ್ಗ: ಕರೋನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಕರೋನಾ ಎಫೆಕ್ಟ್ ನಿಂದ ಸಂತ್ರಸ್ಥರಾದವರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ಕಾಶಿ ಜಗದ್ಗುರುಗಳಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ದೇಣಿಗೆ ನೀಡಿದರು. ಕಳೆದ 20 ದಿನಗಳಿಂದ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಿರುವ ಕಾಶಿ ಶ್ರೀಗಳು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ 2 ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ದೇಣಿಗೆಯ ಚೆಕ್ಕನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದರು. ಶ್ರೀಗಳು ವಾಸ್ತವ್ಯ ಹೂಡಿರುವ ಶಿವಮೊಗ್ಗ ಹೊರವಲಯದ ಮತ್ತೋಡು ಗ್ರಾಮದ ನಿವಾಸಕ್ಕೆ ತೆರಳಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶ್ರೀಗಳಿಂದ ಚೆಕ್ಕನ್ನು ಸ್ವೀಕರಿಸಿ ಆ ಚೆಕ್ಕನ್ನು ಜಿಲ್ಲಾಧಿಕಾರಿ ಶಿವಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಪ್ರಮುಖರಾದ ಎನ್.ಜೆ.ರಾಜಶೇಖರ್, ಸಂತೋಷ್ ಬಳ್ಳೆಕೆರೆ ಉಪಸ್ಥಿತರಿದ್ದರು.
C News TV Kannada News Online in cnewstv