Breaking News

ಅಬಕಾರಿ‌‌ ಸಿಬ್ಬಂದಿಯಿಂದ‌ ಮಿಲಿಟರಿ ಮದ್ಯ ವಶ

ಶಿವಮೊಗ್ಗ: ಲಾಕ್ ಡೌನ್ ನಡುವೆಯೂ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 15 ಸಾವಿರ ರೂಪಾಯಿ‌ ಮೌಲ್ಯದ ಮಿಲಿಟರಿ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ‌ ನಡೆದಿದೆ. ಭದ್ರಾವತಿ ಬೈಪಾಸ್ ನ ಆಂಜನೇಯ ದೇವಸ್ಥಾನದ ಬಳಿ ಹಾಗೂ ಮಿಲಿಟರಿ ಕ್ಯಾಂಪ್ ಬಳಿ 15 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು 80 ಸಾವಿರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ‌ ಇನ್ಸ್ ಪೆಕ್ಟರ್ ಹನುಮಂತಪ್ಪ‌ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ 7.5 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಮದ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಅಜಿತ್, ಮನೋಜ್, ಕಿರಣ್ ಹಾಗೂ ನವೀನ್ ಎಂಬುವರನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

*