ಶಿವಮೊಗ್ಗ: ಕರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಕರೋನಾ ವೈರಸ್ ಹರಡುವುದನ್ನು ತಡೆಯಲು ಸಾರ್ವಜನಿಕರು ಸಹಕಾರ ನೀಡಲಿ ಎಂಬ ಉದ್ದೇಶದಿಂದ ಪೊಲೀಸರು ಇಂದು ಶಿವಮೊಗ್ಗದಲ್ಲಿ ರೂಟ್ ಮಾರ್ಚ್ ನಡೆಸಿದರು. ಬೆಂಗಳೂರಿನ ಪಾದರಾಯನಪುರದಲ್ಲಿ ಕರೋನಾ ಸೋಂಕು ಶಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲು ಹೋದ ಪೊಲೀಸ್ ಹಾಗೂ ಅರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಡೆದಂತ ಘಟನೆಗಳು ಶಿವಮೊಗ್ಗದಲ್ಲಿ ನಡೆಯದಂತೆ ಶಿವಮೊಗ್ಗ ಜನರಲ್ಲಿ ಜಾಗೃತಿ ಮೂಡಿಸಲು ಶಿವಮೊಗ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ರೂಟ್ ಮಾರ್ಚ್ ಗೆ ಚಾಲನೆ ನೀಡಿದರು. ಬಳಿಕ ಪೊಲೀಸರು ತಮ್ಮ ವಾಹನಗಳಲ್ಲಿ ಶಿವಮೊಗ್ಗದ ಪ್ರಮುಖ ರಸ್ತೆಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿದರು.

C News TV Kannada News Online in cnewstv