Breaking News

“ವಿದ್ಯಾರ್ಥಿ ಕಿಟ್” ನೀಡಿ NSUI ಮನವಿ

 

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ “ವಿದ್ಯಾರ್ಥಿ ಕೀಟ್” ವಿತರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಜಿಲ್ಲಾಧಿಕಾರಿ ಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

2020-2021 ರ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕಗಳು,ನೋಟ್ ಬುಕ್, ಹಾಗೂ ಅಗತ್ಯ ಶೈಕ್ಷಣಿಕ ವಸ್ತುಗಳನ್ನ ಒಳಗೊಂಡ ಕಿಟ್ ಗಳನ್ನ ವಿತರಿಸಬೇಕು ಹಾಗೂ ಈ ಕಿಟ್ ಗಳಿಗೆ ಶುಲ್ಕ ವಿಧಿಸದೆ ಉಚಿತವಾಗಿ ಹಂಚಬೇಕು ಎಂದು ಆಗ್ರಹಿಸಿದರು.‌ ಮನವಿ ನೀಡುವ ಸಂದರ್ಭದಲ್ಲಿ ಎನ್ ಎಸ್ ಯು ಐ ನ ಜಿಲ್ಲಾಧ್ಯಕ್ಷ ಹೆಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ಮಂಜು, ಭರತ್, ಆಕಾಶ್, ಅಬ್ದುಲ್ ಸತ್ತರ್, ಗಿರೀಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*