ಶಿವಮೊಗ್ಗ : ಮುಂಬಯಿಯಿಂದ ಹಿಂತಿರುಗಿದ್ದ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ ಕರೋನಾ ಸೋಂಕು ಪಾಸಿಟಿವ್ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಸೋಂಕಿತ ವ್ಯಕ್ತಿ ಈಗಾಗಲೇ ಕ್ವಾರೆಂಟೈನ್‍ನಲ್ಲಿದ್ದ ಕಾರಣ ಆತಂಕ ಪಡುವ ಅಗತ್ಯವಿಲ್ಲ. ಆ ವ್ಯಕ್ತಿಯೊಂದು ಪ್ರಾಥಮಿಕವಾಗಿ ಸಂಬಂಧ ಹೊಂದಿದ್ದ 12 ಮಂದಿಯನ್ನು ಗುರುತಿಸಲಾಗಿದ್ದು, ಎಲ್ಲರನ್ನು ಕ್ವಾರೆಂಟೈನ್ ಮಾಡಲಾಗಿದೆ. ಇನ್ನುಳಿದಂತೆ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ತಕ್ಷಣ ಕ್ವಾರೆಂಟೈನ್ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು..ಅಲ್ಲದೆ ಕೊರೋನ ಪಾಸಿಟಿವ್ ಕಂಡುಬಂದ ವ್ಯಕ್ತಿಯು ಮುಂಬೈನಿಂದ ಬಂದಿರುವುದಾಗಿ ಸ್ಪಷ್ಟಪಡಿಸಿದರು.
Recent Comments