Breaking News

ಯಾವುದೇ ಸರ್ಕಾರಿ ಸಂಸ್ಥೆ ಸೀಲ್ ಡೌನ್ ಆಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

 

ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಮೂರು ಮಂದಿ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿದ್ದಾರೆ. ಇನ್ನುಳಿದಂತೆ ಯಾವುದೇ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿರುವುದಿಲ್ಲ. ಆದರೆ ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ 11ಮಂದಿ ಪೊಲೀಸ್ ಅಧಿಕಾರಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ವಿಶೇಷ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸುವುದು ಸಾಮಾನ್ಯವಾಗಿದ್ದು, ಆದರೂ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹೊರ ಜಿಲ್ಲೆಯ ಅಧಿಕಾರಿಗಳು ಹೆಚ್ವುವರಿ ಕರ್ತವ್ಯ ವಹಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಎಲ್ಲಾ ಸರ್ಕಾರಿ ಕಚೇರಿಗಳನ್ನು ನಿಗದಿತ ಅವಧಿಯಲ್ಲಿ ಸಂಪೂರ್ಣ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

 

Leave a Reply

Your email address will not be published. Required fields are marked *

*