ಶಿವಮೊಗ್ಗ : ಜಿಲ್ಲೆಯಲ್ಲಿ ಇದುವರೆಗೆ 5172 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಇದರ ಪೈಕಿ 4828 ಫಲಿತಾಂಶ ಬಂದಿದ್ದು, 320 ಬರಬೇಕಿದೆ. 4804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದ ಆಗಮಿಸಿದ್ದ 1158 ಜನರನ್ನು ಕ್ವಾರೆಂಟೈನ್ ಮಾಡಿ ಪರೀಕ್ಷೆ ನಡೆಸಲಾಗಿದೆ. 943 ಫಲಿತಾಂಶ ಬಂದಿದೆ. ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70ಮಂದಿ ಹೊರ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ.
ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಎಲ್ಲರ ಗಂಟಲ ದ್ರವ ತಪಾಸಣೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು.
Recent Comments