Breaking News

ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್, ಸಿಪಿಐ ಅಮಾನತ್ತಿಗೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.‌ ಸಾಗರ ವಕೀಲ ಪ್ರವೀಣ್ ಎಂಬುವರು ನೀಡಿದ ದೂರಿನ‌ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಪ್ರವೀಣ್ ನೀಡಿದ ಸುಳ್ಳು ದೂರು ಆಧರಿಸಿ ಎಫ್ ಐ ಆರ್ ದಾಖಲಿಸಿದ ಸಾಗರ ಪಟ್ಟಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ಎಎಸ್ ಪಿ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕೇರ್ ಫಂಡ್ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಪ್ರಕಟಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಪ್ರವೀಣ್ ದೂರಿನಲ್ಲಿ ತಿಳಿಸಿದ್ದರು. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಾಗಿತ್ತು. ಸೋನಿಯಾಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನೇತೃತ್ವದ ಕಾಂಗ್ರೆಸ್ ನಾಯಕರು ಎಎಸ್ ಪಿ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಸುಳ್ಳುಸುದ್ದಿ ಆಧರಿಸಿ ಸೋನಿಯಾಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತ್ತುಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments