ಶಿವಮೊಗ್ಗ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಜೂನ್ 1 ರಿಂದ ಆರಂಭಗೊಳ್ಳಲಿದೆ. ಕರೋನಾ ಆತಂಕದಿಂದಾಗಿ ಕಳೆದ ಎರಡು ತಿಂಗಳಿನಿಂದ ಭಕ್ತರಿಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ನಿರ್ಬಂಧಿಸಲಾಗಿತ್ತು. ಇದೀಗ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಭಾಗ್ಯವನ್ನು ಭಕ್ತರಿಗೆ ಕರುಣಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಹೀಗಾಗಿ ಜೂನ್ 1 ರಿಂದ ಭಕ್ತರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ತೆರೆಯಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ದೇವಸ್ಥಾನದ ಆವರಣದಲ್ಲಿ ನಿಯಮಿತವಾಗಿ ಸ್ಯಾನಿಟೈನೇಷನ್ ಮಾಡುವ ಮೂಲಕ ದೇವಾಲಯ ಸ್ವಚ್ಚವಾಗಿಟ್ಟುಕೊಳ್ಳಬೇಕು. ಬರುವ ಭಕ್ತರಿಗೆ ಸ್ಯಾನಿಟೈಸರ್ ಬಳಸುವಂತೆ ಸೂಚಿಸಬೇಕು. ಬಳಿಕ ಪ್ರತಿ ಭಕ್ತರನ್ನು ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಬೇಕು. ಇದಾದ ನಂತರದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿ ದರ್ಶನಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ.
C News TV Kannada News Online in cnewstv