ಶಿವಮೊಗ್ಗ: ಕರೋನಾ ಆತಂಕದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಇಡೀ ಪೊಲೀಸ್ ಠಾಣೆಗೂ ಸ್ಯಾನಿಟೈಸೇಷನ್ ಮಾಡಲಾಗಿದೆ. ಕೆಎಸ್ ಆರ್ ಪಿ ಎಎಸ್ ಐ ಸೇರಿದಂತೆ ಆರು ಜನ ಕೆಎಸ್ ಆರ್ ಪಿ ಪೊಲೀಸರಿಗೆ ಕರೋನಾ ಕಾಣಿಸಿಕೊಂಡಿತ್ತು. ಕೆಎಸ್ ಆರ್ ಪಿ ಎಎಸ್ ಐ ಮಗಳು ಜಯನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರೋನಾ ಸೋಂಕಿತ ಎಎಸ್ ಐ ಪ್ರಾಥಮಿಕ ಸಂಪರ್ಕದಲ್ಲಿ ಅವರ ಮಗಳೂ ಇದ್ದ ಹಿನ್ನೆಲೆಯಲ್ಲಿ ಜಯನಗರ ಪೊಲೀಸ್ ಠಾಣೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಇದರಿಂದಾಗಿ ಪೊಲೀಸ್ ಠಾಣೆ ಆವರಣದಲ್ಲಿ ಶಾಮಿಯಾನ ಹಾಕಿಕೊಂಡು ಜಯನಗರ ಠಾಣೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.
C News TV Kannada News Online in cnewstv