ಶಿವಮೊಗ್ಗ : ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಇಲಾಖೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಯನ್ನು ಪಾಲಿಸಬೇಕು. ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತಂಡ ಇರುವುದು. ಪ್ರತಿಯೊಬ್ಬರ ಥರ್ಮಲ್ ಸ್ಕ್ಯಾನ್ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಯ ದೇಹದ ತಾಪಮಾನ ಹೆಚ್ಚಿರುವುದು ಕಂಡು ಬಂದರೆ, ಅದನ್ನು ಬಹಿರಂಗಪಡಿಸದೇ, ಗೊಂದಲಕ್ಕೆ ಅವಕಾಶ ನೀಡದೆ, ಅಂತಹ ವಿದ್ಯಾರ್ಥಿಗಳಿಗೆ ಮೀಸಲಾಗಿರಿಸಿರುವ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು..
ಜೂನ್ 25ರಿಂದ ಜುಲೈ 3ರವರೆಗೆ ನಡೆಯಲಿರುವ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ 24243 ವಿದ್ಯಾರ್ಥಿಗಳು ಬರೆಯಲಿದ್ದು, ಇವರಲ್ಲಿ 12287 ಬಾಲಕರು ಹಾಗೂ 11956 ಬಾಲಕಿಯರು ಇದ್ದಾರೆ.
84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 45 ಸರ್ಕಾರಿ, 24 ಅನುದಾನಿತ, 15ಅನುದಾನರಹಿತ ಹಾಗೂ 2 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ ಭದ್ರಾವತಿ 15, ಹೊಸನಗರ 5, ಸಾಗರ 10, ಶಿಕಾರಿಪುರ 11, ಶಿವಮೊಗ್ಗ 26, ಸೊರಬ 10 ಮತ್ತು ತೀರ್ಥಹಳ್ಳಿಯಲ್ಲಿ 7 ಪರೀಕ್ಷಾ ಕೇಂದ್ರಗಳಿವೆ..
C News TV Kannada News Online in cnewstv