ಫ್ಯಾಮಿಲಿ ಪ್ಯಾಕ್ ಇದು ನೂತನವಾಗಿ ಸೆಟ್ಟೇರಲಿರುವ ಕನ್ನಡ ಚಲನಚಿತ್ರದ ಹೆಸರು. ಈ ಹೆಸರು ಕೇಳಿದಾಕ್ಷಣ ಯಾರಾದರೂ ಇದು ಪಕ್ಕಾ ಕಾಮಿಡಿ ಚಿತ್ರ ಎಂದುಕೊಳ್ಳುತ್ತಾರೆ. ಹೌದು ಇದೊಂದು ಪಕ್ಕಾ ಕಾಮಿಡಿ ಪ್ರಿಯರಿಗೆ ಹೇಳಿ ಮಾಡಿಸಿದಂತಾ ಚಲನಚಿತ್ರ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಈ ಚಲನಚಿತ್ರ ನಿರ್ಮಿಸಿ ಅರ್ಪಿಸುತ್ತಿದ್ದಾರೆ. ಇನ್ನು ಸಂಕಷ್ಟಕರ ಗಣಪತಿ ಚಿತ್ರದಲ್ಲಿ ಒಂದಾಗಿದ್ದ ನಿರ್ದೇಶಕ ಅರ್ಜುನ್ ಕುಮಾರ್ ಹಾಗೂ ನಾಯಕ ನಟ ಲಿಖಿತ್ ಶೆಟ್ಟಿ ಜೋಡಿ ಫ್ಯಾಮಿಲಿ ಪ್ಯಾಕ್ ಚಿತ್ರದಲ್ಲೂ ಮುಂದುವರಿದಿದೆ. ಇನ್ನು ಚಿತ್ರದ ನಾಯಕಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಹಾಸ್ಯ ನಟ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗುರುಕಿರಣ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಫ್ಯಾಮಿಲಿ ಪ್ಯಾಕ್ ಪ್ರೇಕ್ಷಕರನ್ನು ರಂಜಿಸಲಿದೆ ಎಂಬ ಆತ್ಮವಿಶ್ವಾಸ ಚಿತ್ರತಂಡಕ್ಕಿದೆ.
Recent Comments