Breaking News

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 22 ಕರೋನಾ ಪ್ರಕರಣಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರು 22 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ವಿದೇಶ, ಅಂತರರಾಜ್ಯ ಹಾಗೂ ಕರೋನಾ ಸೋಂಕಿತರೊಂದಿಗೆ ಸಂಪರ್ಕ ಹೊ‌ಂದಿದ್ದವರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 13 ಜನರಲ್ಲಿ ಇಂದು ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ವಿದೇಶ ಹಾಗೂ ಅಂತರ್ ರಾಜ್ಯ ಹಾಗೂ ಬೆಂಗಳೂರಿನಿಂದ ಬಂದ 9 ಜನರಲ್ಲಿ ಇಂದು ಕರೋನಾ ವೈರಸ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 173 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇದುವರೆಗೆ 109 ಜನರು ಕರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಪ್ರಸ್ತುತ ಶಿವಮೊಗ್ಗದಲ್ಲಿ 62 ಜನ ಕರೋನಾ ಸೋಂಕಿತರಿದ್ದು, ಇವರೆಲ್ಲರಿಗೂ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

*