ಶಿವಮೊಗ್ಗ: ಕರೋನಾ ಪಿಪಿಇ ಕಿಟ್ ಖರೀದಿ ಹಾಗೂ ಔಷದ ಮತ್ತು ಇತರೆ ಪರಿಕರಗಳ ಖರೀದಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕರೋನಾ ಹರಡುವುದನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದೇಶದ ಯಾವ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಅಲ್ಲಿ ಕರೋನಾ ತಡೆಯಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.
ಬಿಜೆಪಿಯವರಿಗೆ ಇರುವ ಜನಪರ ಕಾಳಜಿಯನ್ನು ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆಯೇ ಆಂಬುಲೆನ್ಸ್ ಖರೀದಿಸುವಂತೆ ಒತ್ತಾಯಿಸಿದ್ದೆವು. ಆದರೆ ಸರ್ಕಾರ ನಮ್ಮ ಒತ್ತಾಯಕ್ಕೆ ಸೊಪ್ಪು ಹಾಕಿರಲಿಲ್ಲ. ಇದರಿಂದಾಗಿ ಪ್ರಸ್ತುತ ಕರೋನಾ ರೋಗಿಗಳನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೂ 20 ಆಂಬುಲೆನ್ಸ್ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ರಮ ಕೈಗೊಳ್ಳಬೇಕು ಎಂದು ಸುಂದರೇಶ್ ಆಗ್ರಹಿಸಿದರು.
Recent Comments