ಶಿವಮೊಗ್ಗ : ಮಹಾಮಾರಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 13 ರಿಂದ ಆಗಸ್ಟ್ 12 ರವರೆಗೆ ಅರ್ಧ ದಿನ ವ್ಯಾಪಾರ ಮಾಡಲು ನಿರ್ಧರಿಸಲಾಗಿದೆ. ಬೆಳ್ಳಿಗೆ 8 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದ್ದು, 3 ಗಂಟೆಯ ನಂತರ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದಾರೆ.
ಪುಟ್ ಬಾತ್ ನಲ್ಲಿ ವ್ಯಾಪಾರ ಮಾಡುವುದು ಹಾಗೂ ಪ್ರತಿ ಮಂಗಳವಾರ ಗಾಂಧಿಬಜಾರಿನಲ್ಲಿ ನಡೆಯುತ್ತಿದ್ದ ಸಂತೆಯನ್ನು ಸಹಾ ಕಡ್ಡಾಯವಾಗಿ ರದ್ದು ಮಾಡಲಾಗಿದೆ ಅದರೆ ಅಗತ್ಯ ಸೇವೆಗಳಾದ ಔಷಧಿ ಹಾಗೂ ಹಾಲು ಮಾರಾಟ ಮಾಡುವವರಿಗೆ ರಿಯಾಯಿತಿಯನ್ನು ನೀಡಲಾಗಿದೆ ಎಂದು ಗಾಂಧಿಬಜಾರ್ ವರ್ತಕರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಇಂದು ಪ್ರತಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
C News TV Kannada News Online in cnewstv