ಶಿವಮೊಗ್ಗ ಜಿಲ್ಲೆಯಲ್ಲಿ ಮಹಾಮಾರಿ ಕರೋನಾ ವೈರಸ್ ಹರಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನಿಂದ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ದೆಗಳ ಜೊತೆ ಚರ್ಚಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ ಎಂದು ಮಾಹಿತಿ ನೀಡಿದರು.
ಪೆಟ್ರೋಲ್ ಬಂಕ್, ಮದ್ಯದ ಅಂಗಡಿಗಳು, ಬ್ಯಾಂಕ್ ವ್ಯವಹಾರಗಳು ಎಲ್ಲವೂ ಸೇರಿದಂತೆ ಮಧ್ಯಾಹ್ನ 2 ಗಂಟೆಗೆ ಬಂದ್ ಆಗಬೇಕು. ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯಲ್ಲಿ ಮದುವೆ ಹಾಗೂ ಸಮಾರಂಭಗಳನ್ನು ಸರ್ಕಾರದ ಆದೇಶದಂತೆ ನಡೆಸಬೇಕು. ಅದರೆ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದರು.
Recent Comments