Breaking News

ನಾಳೆಯಿಂದ ಯಾವುದೇ ಪ್ರದೇಶದಲ್ಲಿ‌ ಸೀಲ್ ಡೌನ್ ಇಲ್ಲ. ಶಿವಮೊಗ್ಗ ನಗರದ 7 ವಾರ್ಡ್ ಗಳಲ್ಲಿ ವಿಧಿಸಿದ್ದ ಸೀಲ್ ಡೌನ್ ರದ್ದು : ಕೆ.ಎಸ್.ಈಶ್ವರಪ್ಪ

 

ಶಿವಮೊಗ್ಗ: ಶಿವಮೊಗ್ಗ ನಗರದ ಕೆಲವು ವಾರ್ಡ್ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರಗಳ ಕ್ಲಸ್ಟರ್ ಕಂಟೈನ್‌ಮೆAಟ್ ಝೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ರಾಜ್ಯದ ಎಲ್ಲೆಡೆ ಲಾಕ್‌ಡೌನ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯರು ತಾವೇ ಕರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್ ತೆರವುಗೊಳಿಸಲು ನಿರ್ಧರಿಸಲಾಗಿದೆ.

ಇನ್ನು ಮುಂದೆ ಕರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬರುವ ಮನೆಗಳನ್ನು ಮಾತ್ರ ಸೀಲ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜವಾಬ್ದಾರಿ ಹೆಚ್ಚಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸುವುದು, ಗುಂಪು ಸೇರದಿರುವುದು, ಅಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಬರುವುದು ಮುಂತಾದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

*