ಕೊರೋನಾ ಮಹಾಮಾರಿಯಿಂದ ರಾಜ್ಯದ ಜನ ತತ್ತರಿಸಿದ್ದು. ಇಂತಹ ಸಂದರ್ಭದಲ್ಲಿ ಆರೋಗ್ಯ ರಕ್ಷಣೆ ನೀಡಬೇಕಾದ ಸರ್ಕಾರ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಸಾವಿರಾರು ಕೋಟಿಗಟ್ಟಲೆ ಲೂಟಿ ಹೊಡೆಯುತ್ತಿರುವುದು ರಾಜ್ಯದ ಸಚಿವರುಗಳು ನೀಡುತ್ತಿರುವ ಹೇಳಿಕೆಗಳಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿದ್ದು. ರಾಜ್ಯ ಸರ್ಕಾರದ “ಕೊರೋನಾ ಖರ್ಚು – ಲೆಕ್ಕ ಕೊಡಿ” ಅಂಚೆ ಪತ್ರ ಚಳುವಳಿಯನ್ನು ಮಾಡುವ ಮೂಲಕ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು.
ಕೊರೋನ ಸಂದರ್ಭದಲ್ಲಿ ಖರೀದಿ ಮಾಡಿದ ವೈದ್ಯಕೀಯ ಪರಿಕರಗಳಾದ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್, ಕೊರೋನಾ ಸೊಂಕಿತರಿಗಾಗಿ ಬಳಸುವ ಬೆಡ್ ಗಳು , ಆಹಾರದ ಕಿಟ್ ಹಾಗೂ ಇನ್ನಿತರ ಸರ್ಜಿಕಲ್ ಪರಿಕರಗಳನ್ನು ಮಾರುಕಟ್ಟೆಯ ಬೆಲೆಗಿಂತ ಮೂರು- ನಾಲ್ಕು ಪಟ್ಟು ಹೆಚ್ಚು ಹಣವನ್ನು ಕೊಟ್ಟು ಖರೀದಿಸುತ್ತಿದೆ ಹಾಗೂ ಸಂಘ ಸಂಸ್ಥೆಗಳು ಹಾಗೂ ದಾನಿಗಳು ಕೊಟ್ಟಂತಹ ಆಹಾರದ ಕಿಟ್ ಗಳಿಗೆ ಸರ್ಕಾರ ನಾವೇ ಖರೀದಿಸಿದ್ದೇವೆ ಎಂದು ಸುಳ್ಳು ಲೆಕ್ಕವನ್ನು ನೀಡುತ್ತಿದೆ.
ದಿನನಿತ್ಯ ಒಬ್ಬೊಬ ಸಚಿವರು ಒಂದೊಂದು ರೀತಿ ಹೇಳಿಕೆ ನೀಡುತ್ತಿರುವುದು. ಹಾಗೂ ರಾಜ್ಯದ ಜನರಲ್ಲಿ ಅನುಮಾನ ಮೂಡಿದೆ ಈ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಶ್ವೇತ ಪತ್ರವನ್ನು ಹೊರಡಿಸಿ ರಾಜ್ಯದ ಜನತೆಗೆ ಕರೋನ ಖರ್ಚಿನ ಲೆಕ್ಕವನ್ನು ಕೊಡಬೇಕೆಂದು ಒತ್ತಾಯಿಸಿದರು.
C News TV Kannada News Online in cnewstv