ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ವಿಜಯ್ ರಾಘವೇಂದ್ರ ರವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾದ ಶಿವಮೊಗ್ಗದ ಬಂಕ್ ಒಂದರಲ್ಲಿ ಪೆಟ್ರೋಲ್ ಹಾಕಿಸಿದ್ದಾರೆ ಅದರೆ ಬಂಕ್ ಸಿಬ್ಬಂದಿಗಳು ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ್ದಾರೆ. ನಂತರ ಸಿಬ್ಬಂದಿಗಳು ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದ್ದಾರೆ. ಬಳಿಕ ಕಾರನ್ನು ಲಾರಿಯಲ್ಲಿ ಹತ್ತಿಸಿ ಸರ್ವೀಸ್ ಗೆ ಕಳುಹಿ, ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡಿದರು.
Recent Comments