Breaking News

ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಸೋಂಕು

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಬಿಸಿ ತಟ್ಟಿದೆ. ನಿನ್ನೆ ಕರೋನಾ ತಪಾಸಣೆಗೆ ಈಶ್ವರಪ್ಪ ಒಳಗಾಗಿದ್ದರು. ಈ ತಪಾಸಣೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಈಶ್ವರಪ್ಪ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ ಅವರ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ಹಾಗೂ ಅವರ ಕುಟುಂಬದವರು ಕರೋನಾ ಟೆಸ್ಟ್ ಗೆ ಒಳಗಾಗಿದ್ದರು. ಈಶ್ವರಪ್ಪ ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಈಶ್ವರಪ್ಪ ಅವರು ನನಗೆ ಕರೋನಾ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನಗೆ ಯಾವುದೇ ರೋಗ ಲಕ್ಷಣಗಳೂ ಇಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ಆಗುವ ಜೊತೆಗೆ ಕರೋನಾ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

*