Breaking News

ಗ್ರಾಮ ಪಂಚಾಯತ್ ಚುನಾವಣೆಗೆ ಶೀಘ್ರ ಮುಹೂರ್ತ!

 

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದೆ.ಈಗಾಗಲೇ ಹಳ್ಳಿ ಹಳ್ಳಿಯಲ್ಲೂ ಚುನಾವಣಾ ವೇದಿಕೆ ಸಿದ್ಧಗೊಂಡಿದೆ. ಚುನಾವಣೆ ಮಾರ್ಗಸೂಚಿಯನ್ನು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.

* ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕಚೇರಿಗಳ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ನಲ್ಲಿ ಕೈ ಶುಚಿಗೊಳಿಸಿಕೊಳ್ಳುವುದು.
* ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಕಡ್ಡಾಯ.
* ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
* ಚುನಾವಣಾ ಕಾರ್ಯಗಳನ್ನ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ನಡೆಸುವುದು.
* ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ  ಫೇಸ್ ಮಾಸ್ಕ್ ಧರಿಸಬೇಕು.  ಕೈಗಳಿಗೆ ಗ್ಲೌಸ್  ಕಡ್ಡಾಯವಾಗಿ ಧರಿಸಬೇಕು.
* ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಮತ್ತು ಒಬ್ಬ ಸೂಚಕನಿಗೆ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿರುತ್ತದೆ.
* ಕೊರೋನಾ ಪಾಸಿಟಿವ್ ವ್ಯಕ್ತಿ  ನಾಮಪತ್ರ ಸಲ್ಲಿಸಲು ಇಚ್ಛಿಸಿದರೇ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು.
* ನಾಮಪತ್ರ ಪರಿಶೀಲನೆ ವೇಳೆ ಕ್ಷೇತ್ರವಾರು ಹಾಜರಿರುವ ಅಭ್ಯರ್ಥಿಗಳ  ಸಮ್ಮುಖದಲ್ಲಿ ಮಾಡಬೇಕು.
* ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಐದು ಮಂದಿಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿರುತ್ತದೆ. ಪ್ರಚಾರದ ವೇಳೆ ಫೇಸ್ ಮಾಸ್ಕ್ ಧರಿಸಬೇಕು.
* ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನ ಹಂಚಬಹುದು. ಹಂಚುವಾಗ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು.
* ಮತದಾನದ ದಿನ ಮತಗಟ್ಟೆ ಅಧಿಕಾರಿಗಳು ಫೇಸ್ ಮಾಸ್ಕ್ ಹ್ಯಾಂಡ್ ಗ್ಲೌಸ್ ಧರಿಸಬೇಕು.
* ಮತದಾರರು ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು.
* ಮತದಾನ ಕೊಠಡಿ ಪ್ರವೇಶಿಸುವ ವೇಳೆ ಕೋವಿಡ್ ಥರ್ಮಲ್ ಜ್ವರ ತಪಾಸಣೆ ಕಡ್ಡಾಯ ಎಂಬ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Leave a Reply

Your email address will not be published. Required fields are marked *

*