ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ.
ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
C News TV Kannada News Online in cnewstv