ನಾಗ್ಪುರ: ನಾಗ್ಪುರದ ಭೋಲ್ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜೂಜು ಅಡ್ಡ ನಡೆಸುತ್ತಿದ್ದ ಬಾಲ್ಯ ಅಲಿಯಾಸ್ ಕಿಶೋರ್ ಬಿನೇಕರ್ ಎಂಬಾತನನ್ನು ಬರ್ಭರವಾಗಿ ಹತ್ಯೆ ಮಾಡಲಾಗಿದೆ. ಕಿಶೋರ್ ಬಿನೇಕರ್ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಕಿಶೋರ್ ನನ್ನು ಹೊರಗಡೆ ಎಳೆದು ಚಾಕುವಿನಂದ ಮನಸೋಇಚ್ಛೆ ಚುಚ್ಚಿ ಕೊಲೆ ಮಾಡಿದ್ದಾರೆ. ಈಸಂಬಂಧ ಸೀತಾಬಾರ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.