Breaking News

ಮಾಸ್ಕ್ ಧರಿಸದವರಿಗೆ ದಂಡ‌ ಹಾಕುತ್ತಿರುವ ಪೊಲೀಸರು.

 

ಶಿವಮೊಗ್ಗ : ಕರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮಾಸ್ಕ್ ಬಳಕೆ ಮಾಡಿರುವ ರಾಜ್ಯ ಸರ್ಕಾರ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದವರಿಗೆ 1000 ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂಪಾಯಿ ದಂಡ ವಿಧಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲೂ ಪೊಲೀಸರು ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ದಂಡ ವಿಧಿಸಲಾರಂಭಿಸಿದ್ದಾರೆ. ಶಿವಮೊಗ್ಗದಲ್ಲಿ ಪ್ರಾಯೋಗಿಕವಾಗಿ ಮಾಸ್ಕ್ ಧರಿಸದವರಿಗೆ 200 ರೂಪಾಯಿ ದಂಡ ವಿಧಿಸುತ್ತಿದ್ದಾರೆ. ಶಿವಮೊಗ್ಗದ ವಿವಿಧ ಸರ್ಕಲ್ ಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಮಾಸ್ಕ್ ಧರಿಸದವರನ್ನು ನಿಲ್ಲಿಸಿ ದಂಡ ವಿಧಿಸಲಾಗುತ್ತಿದೆ. ನಾಳಿನಿಂದ ಯಾರು ಮಾಸ್ಕ್ ಧರಿಸುವುದಿಲ್ಲವೋ ಅವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ.

Leave a Reply

Your email address will not be published. Required fields are marked *

*