ಶಿವಮೊಗ್ಗ : ಗರ್ಬಿಣಿ, ಬಾಣಂತಿಯರಿಗೆ, ಮಕ್ಕಳಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರ ಒದಗಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೇಂದ್ರಸರ್ಕಾರ ಡಿಜಿಟಲ್ ಇಂಡಿಯಾದ ಪೋಷಣ್ ಅಭಿಯಾನದ ಅಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಲಾಗಿತ್ತಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 2439 ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಮೊಬೈಲ್ ವಿತರಿಸಲಾಯಿತು. ಪೇಪರ್‌ಲೆಸ್ ಆಫೀಸ್ ಕಾನ್ಸೆಪ್ಟ್ ಅಡಿ ಮೊಬೈಲ್ ವಿತರಿಸಲಾಗುತ್ತಿದೆ. ಕಾಮನ್ ಅಪ್ಲಿಕೇಷನ್ ಸಿಸ್ಟಮ್ ಹಾಗೂ ಸ್ನೇಹ ಆ್ಯಪ್ ಅಳವಡಿಸಿಕೊಂಡು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಈ ಮೊಬೈಲ್ ಅನುಕೂಲವಾಗಲಿದೆ. ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿದರು.

C News TV Kannada News Online in cnewstv