Breaking News

ಮತ್ತೆ ಕುಸಿದ ರಂಜದಕಟ್ಟೆ ಸೇತುವೆ

ಶಿವಮೊಗ್ಗ: ಸೆಪ್ಟಂಬರ್ ತಿಂಗಳಲ್ಲಿ‌ ಸುರಿದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಬಿಂತಳ ಹಳ್ಳ ಸೇತುವೆ ಕುಸಿದು ಶಿವಮೊಗ್ಗ ಉಡುಪಿ ನಡುವಿನ ಸಂಚಾರ ಸ್ಥಗಿತಗೊಂಡಿತ್ತು. ಈ ಮಾರ್ಗವಾಗಿ ಮಣಿಪಾಲ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಎರಡೇ ದಿನದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ತಾತ್ಕಾಲಿಕ ಸೇತುವೆಯೂ ಕುಸಿದಿದ್ದು ಮತ್ತೆ ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ. ಇದೇ ರೀತಿ ಮಳೆ‌ ಮುಂದುವರಿದಿದ್ದೇ ಆದಲ್ಲಿ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿಹೋಗುವ ಆತಂಕ ಎದುರಾಗಿದೆ. ಇದೀಗ ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳ್ಳಿ ರಸ್ತೆಗಳ ಮೂಲಕ ಪರ್ಯಾಯ ಮಾರ್ಗದಲ್ಲಿ ತೆರಳುವಂತಾಗಿದೆ.

 

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments