ಶಿವಮೊಗ್ಗ: ಸಿಗಂದೂರಿನಲ್ಲಿ ಎರಡು ದಿನದ ಹಿಂದೆ ನಡೆದಿರುವ ಘಟನೆ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಜಿಲ್ಲಾಧಿಕಾರಿ ಸಿಗಂದೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಯಿಂದ ಸಿಗಂದೂರು ದೇವಾಲಯದ ಘಟನೆ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಜೊತೆಗೆ ದೇವಾಲಯದ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದರು.
