ಶಿವಮೊಗ್ಗ: ಬರೋಬ್ಬರಿ ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತನ್ನ ತವರು ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಶಿಕಾರಿಪುರಕ್ಕೆ ಸಿಎಂ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿದೆ. ಕೂಡಲೇ ಮಳೆ ನಿಂತು ಪ್ರವಾಹ ತಗ್ಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕೊಡುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತರ ನೆರವಿಗೆ ಶಕ್ತಿಮೀರಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
