Breaking News

ಈದ್ ಮಿಲಾದ್ ಹಬ್ಬವನ್ನು ಕೋವಿಡ್-19ರ ಶಿಷ್ಟಾಚಾರದಂತೆ ಆಚರಿಸಲು ಮನವಿ

 

ಶಿವಮೊಗ್ಗ : ಕೋವಿಡ್-19 ಹಿನ್ನೆಲೆಯಲ್ಲಿ ಅ.30ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಮಾದರ್ ಪಟೇಲ್ ತಿಳಿಸಿದ್ದಾರೆ.

ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕøತಿಕ ಕಾರ್ಯಕ್ರಮ/ಸಭೆ ಸಮಾರಂಭಗಳನ್ನು, ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜೆ ಬಳಕೆಯನ್ನು, ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವುದು ಕಡ್ಡಾಯವಾಗಿ ನಿಷೇಧಿಸಿದೆ.

ಮಸೀದಿ/ದರ್ಗಾಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಉಪಯೋಗಿಸುವುದು, ಸ್ಯಾನಿಟೈಸರ್ ಹಾಗೂ ಸೋಪಿನಲ್ಲಿ ಕೈತೊಳೆಯುವುದು, ದೈಹಿಕ ಅಂತರ ಕಾಪಾಡುವುದು ಮತ್ತು ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ಶಾಂತಿಯುತವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲು ಜಿಲ್ಲಾ ವಕ್ಫ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

*