ಶಿವಮೊಗ್ಗ: ಇಂದು ಸಂಜೆ ವೇಳೆ ಅರ್ಧ ಗಂಟೆ ಸುರಿದ ಮಳೆ ಶಿವಮೊಗ್ಗ ನಗರದಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗುತ್ತಿದೆ. ಆದರೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರಂಭವಾದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಎಲ್ಲ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ಶಿವಮೊಗ್ಗ ಪಾರ್ಕ್ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆ ಮೇಲೆ ಬರೋಬ್ಬರಿ ಎರಡು ಅಡಿಗೂ ಹೆಚ್ಚು ನೀರು ನಿಂತಿತ್ತು. ಅರ್ಧ ಗಂಟೆ ಸುರಿದ ಧಾರಾಕಾರ ಮಳೆ ಇನ್ನರ್ಧ ಗಂಟೆ ಸುರಿದಿದ್ದರೆ ಶಿವಮೊಗ್ಗದ ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲವುಗಳಿಗೂ ನೀರು ನುಗ್ಗುವ ಆತಂಕ ಎದುರಾಗಿತ್ತು.

C News TV Kannada News Online in cnewstv