Breaking News

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ.

 

ಶಿವಮೊಗ್ಗ : ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟಿಸಲಾಗಿದೆ. ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ 130 ಜನ ಸಾಧಕರು ಅರ್ಜಿ ಸಲ್ಲಿಸಿದರು ಆದರೆ ಈ ಪೈಕಿ 26 ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿದ 65 ಜನ ಸಾಧಕರಿಗೆ ಮಾತ್ರ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಸುರೇಶ್ ಗೌಡರು ಆದೇಶವನ್ನು ಹೊರಡಿಸಿದ್ದಾರೆ.

ಈ ಬಾರಿ ರಾಜ್ಯ ಸರ್ಕಾರ ಪ್ರಕಟಿಸಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಶಿವಮೊಗ್ಗದ ಮೂವರು ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೈದ್ಯಕೀಯ ವಿಭಾಗದಲ್ಲಿ ಡಾ. ಬಿ ಎಸ್ ಶ್ರೀನಾಥ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಡಾ. ಚಿಂದಿ ವಾಸುದೇವಪ್ಪ. ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಎಂ ಕೆ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

*