ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದ್ದು 70 ಸಾವಿರ ಪ್ರದೇಶಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ಆದರೆ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಖರೀದಿಸಬೇಕು. ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು MSP ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮತ್ತು ಖರೀದಿ ಮಾಡುವುದು ಅಪರಾಧವೆಂದು ಘೋಷಿಸಬೇಕು. ಕೇರಳ ಸರ್ಕಾರದಂತೆ ರಾಜ್ಯ ಸರ್ಕಾರವು ಸಹ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದು ವಾಪಸ್ ಪಡೆಯುವಂತೆ ಒತ್ತಾಯಿಸಿ, ನವೆಂಬರ್ 5 ರಂದು ಎಂ.ಅರ್.ಎಸ್ ವೃತ್ತ ದಲ್ಲಿ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇವೆಯ ರಾಜ್ಯ ಗೌರವಾಧ್ಯಕ್ಷರಾದ ಎಚ್ಆರ್ ಬಸವರಾಜಪ್ಪ ನವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು
C News TV Kannada News Online in cnewstv