ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವೈಯಕ್ತಿಕವಾಗಿ ಹಣ ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ. ಕಾಮಗಾರಿ ಅನುಷ್ಠಾನ ಆಗದೆ ಕೂಲಿ ಹಣ ಪಾವತಿಸುತ್ತಿದ್ದಾರೆ. ಆ ಊರಿನವರೇ ಅಲ್ಲದ ವ್ಯಕ್ತಿಗಳಿಗೆ ಹಣವನ್ನು ಪಾವತಿ ಮಾಡಲಾಗಿದೆ. ಇದು ದೊಡ್ಡೇರಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ದೊಡ್ಡೇರಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ರವರು ಎಲ್ಲಾ ಅವ್ಯವ್ಯಹಾರಕ್ಕೆ ಸಾಥ್ ನೀಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಕ್ರಮವನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.
ಗ್ರಾಮಸ್ಥರಿಂದ ಧರಣಿ :
ನಾರಾಯಣ್ ಎಂಬುವರ ಹೆಸರಿನಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿ ಗಂಗೂರಿನ ಸರ್ವೆ ನಂಬರ್ 26ರಲ್ಲಿ 4 ಎಕರೆ 25 ಗುಂಟೆ ಹಾಗೂ ಸರ್ವೆ ನಂಬರ್ 27 ರಲ್ಲಿ 0.5 ಗುಂಟೆ ಅಕ್ರಮ ಸಾಗೂವಳಿ ಪಡೆದು, ನಾರಾಯಣ್ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ತೋರಿಸಿ ಗ್ರಾಮಪಂಚಾಯತಿಗೆ ಅಡಿಕೆ ತೋಟ ನಿರ್ಮಾಣ ಮಾಡುವುದಾಗಿ ಹೇಳಿ ಸರ್ವೆ ನಂಬರ್ 29 ಹಾಗೂ 25ರ ಜಮೀನಿನಲ್ಲಿ ಅಡಿಕೆ ತೋಟ ನಿರ್ಮಾಣ ಮಾಡಿ ಸರ್ಕಾರದ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ.
Recent Comments