ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಂದ ನಡೆಸಿರುವ ವಿವಿಧ ಆಭಿವೃದ್ಧಿ ಕಾಮಗಾರಿಗಳನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಉದ್ಘಾಟಿಸಲಿದ್ದಾರೆ. ಜೊತೆಗೆ ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಗರಾಭಿವೃದ್ಧಿ ಸಚಿವರು ಶಿವಮೊಗ್ಗದಲ್ಲಿ 105 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಮಕ್ಕಳಲ್ಲಿ ಯೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಮಕ್ಕಳನ್ನು ದೈಹಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನಾಳೆ ಬೆಳಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಿದ್ದೇನೆ ಎಂದು ಈಶ್ವರಪ್ಪ ಅವರು ಹೇಳಿದರು. ಇದಲ್ಲದೆ ಕರೋನಾ ಎರಡನೇ ಅಲೆ ಬರುವ ಆತಂಕ ಎದುರಾಗಿದೆ. ಹೀಗಾಗಿ ವಿದೇಶಗಳಿಂದ ಬಂದವರನ್ನು ಹೇಗೆ ಕ್ವಾರಂಟೈನ್ ಮಾಡಬೇಕು ಎಂಬ ಬಗ್ಗೆಯೂ ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದರು.
Recent Comments