ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕನ್ನಡ ವಿರೋಧಿ ನೀತಿ ಅನುಸರಿಸುತ್ತಿವೆ. ಹಂಪಿ ಕನ್ನಡ ಮಾಡುತ್ತಿದೆ. ಆದರೆ ಇದೇ ವೇಳೆಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಮಾತ್ರ ಹಣ ಬಿಡುಗಡೆ ಮಾಡುತ್ತಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇವಲ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರಲ್ಲಿ ಮಾತ್ರ ಸರ್ಕಾರ ಕನ್ನಡ ವಿರೋಧಿ ನೀತಿ ತಾಳುತ್ತಿಲ್ಲ ಇದರ ಜೊತೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಯುತ್ತಿರುವ ಯುವಜನೋತ್ಸವ ಆಯ್ಕೆಯಲ್ಲೂ ಕನ್ನಡ ವಿರೋಧಿ ನಿಲುವು ತಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ನಗರ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆಯಲ್ಲಿ ಆಶುಭಾಷಣ ಸ್ಪರ್ಧೆಯನ್ನು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾಡಬೇಕು, ಏಕಾಂತ ನಾಟಕ, ಸಾಮಾಜಿಕ ಕಳಕಳಿಯ ಬೀದಿನಾಟಕಗಳನ್ನೂ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾಡಬೇಕು ಎಂದು ನಿಯಮ ರೂಪಿಸಲಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ ಹಳ್ಳಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳಿಗೆ ಇದು ಅನ್ಯಾಯ ಮಾಡಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Recent Comments