ಶಿವಮೊಗ್ಗ:
ತಾಲೂಕಿನ ಅಬ್ಬಲಗೆರೆ ಸಮೀಪದ ಹುಣಸೋಡು ಕ್ವಾರಿಯಲ್ಲಿ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿವೆ. ಕ್ವಾರಿಯಲ್ಲಿ ಸ್ಫೋಟದ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್.ರವಿ, ಹುಣಸೋಡು ಕ್ವಾರಿಯಲ್ಲಿ ನಡೆದ ಘಟನೆ ಸಂಬಂಧ ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಸಹ ಮಾಡಿದ್ದೇವೆ. ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಎಲ್ಲವನ್ನು ವಶಕ್ಕೆ ಪಡೆದಿದ್ದೇವೆ. ಇನ್ನೂ ಸ್ಫೋಟಗೊಂಡ ಸ್ಥಳದ ಸುತ್ತಮುತ್ತ ಏನು ಬೇಕಾದ್ರೂ ಸಿಗಬಹುದು. ನಾವು ಹುಡುಕಿ ತೆಗೆಯುತ್ತೇವೆ ಎಂದ ಐಜಿಪಿ, ಸ್ಫೋಟದಲ್ಲಿ ಆನಂತಪುರದ ಹಾಗೂ ಭದ್ರಾವತಿಯ ತಲಾ 3 ಜನರು ಮೃತಪಟ್ಟಿದ್ದಾರೆ. ಇದರಲ್ಲಿ 5 ಗುರುತು ಪತ್ತೇಯಾಗಿದ್ದು, ಇನ್ನೋಬ್ಬರ ಪತ್ತೆಗೆ ಕ್ರಮವಹಿಸಿದ್ದೇವೆ ಎಂದು ಐಜಿಪಿ ಎಸ್.ರವಿ ತಿಳಿಸಿದ್ದಾರೆ.
C News TV Kannada News Online in cnewstv