ಶಿವಮೊಗ್ಗ:
ಕರೋನಾ ವಿರುದ್ಧ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದೆ. ಶಿವಮೊಗ್ಗದ ತುಂಗಾನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಕೋವಿಡ್ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ಲೈವ್ ರನ್ ನಡೆಸಲಾಗಿದ್ದು, ತಲಾ 50 ಸಿಬ್ಬಂದಿಯನ್ನು ಇದಕ್ಕಾಗಿ ಆಯ್ಕೆ ಸಹ ಮಾಡಲಾಗಿತ್ತು.
ಶಿವಮೊಗ್ಗದ ತುಂಗಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ವ್ಯಾಕ್ಸಿನ್ ಲೈವ್ ರನ್ ನಲ್ಲಿ, ಶಿವಮೊಗ್ಗ ತಾ.ಪಂ ಇಓ ಕಲ್ಲಪ್ಪ ಸೇರಿದಂತೆ ಆರ್ಡಿಪಿಆರ್ ಇಲಾಖೆಯ ಸಿಬ್ಬಂದಿ ಲಸಿಕೆ ಪಡೆದುಕೊಂಡಿದ್ದಾರೆ. ಇನ್ನೂ ಫ್ರಂಟ್ ಲೈನ್ ವರ್ಕರ್ಸ್ ಗೆ ಲಸಿಕೆ ನೀಡುವ ವೇಳೆ ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಡಿಹೆಚ್ಓ ಡಾ. ರಾಜೇಶ್ ಸುರಗಿಹಳ್ಳಿ, ವ್ಯಾಕ್ಸಿನೇಷನ್ ಆಫೀಸರ್ ಡಾ. ಎಲ್.ಎನ್. ನಾಯಕ್, ತುಂಗಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಭೀಮಪ್ಪ ಮತ್ತಿತರರು ಉಪಸ್ಥಿತರಿದ್ದರು.
ಯಾರು ಈ ಫ್ರಂಟ್ ಲೈನ್ ವರ್ಕರ್ಸ್…?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಗುರುತಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 7100 ಜನರನ್ನು ಲಸಿಕೆ ನೀಡಲು ನೊಂದಾಯಿಸಲಾಗಿದೆ.
Recent Comments