Breaking News

ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಭಿನಂದನೆ.

ಶಿವಮೊಗ್ಗ,

72ನೇ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ .ಎಂ.ಕೆ ರವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕಿಯಾಗಿರುವ ಅನ್ನಪೂರ್ಣ ಇತ್ತೀಚಿಗೆ ನಡೆದ ಪರೇಡ್ ನಲ್ಲಿ ಭಾಗಿವಹಿಸಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಎನ್ಎಸ್ಎಸ್ ಘಟಕ ಹಾಗೂ ಸ್ಪಂದನಾ ಮಹಿಳಾ ಸಬಲೀಕರಣ ಘಟಕದಿಂದ ಸನ್ಮಾನಿಸಿ, ಗೌರವಿಸಲಾಗಿದೆ.
ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಂ.ಸುರೇಶ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಫ್ರೊ.ಕೆ.ಎಂ.‌ನಾಗರಾಜು, ಎಸ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*