ವಿಜಯಪುರ ಜಿಲ್ಲೆಯಲ್ಲಿನಲ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಿಂದಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಶಿವಮೊಗ್ಗದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಕಾಮಗಾರಿಗೆ ಸಿಎಂ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಜಯಪುರ ವಿಮಾನನಿಲ್ದಾಣವನ್ನು ಎರಡು ಹಂತದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ. ಉಡಾನ್ ಯೋಜನೆಯಡಿ ವಿಮಾನ ಹಾರಾಟಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು. ವಿಜಯಪುರ ವಿಮಾನ ನಿಲ್ದಾಣದಲ್ಲಿ ಏರ್ ಬಸ್ 320 ಹಾರಾಟಕ್ಕೆ ಅನುಕೂಲವಾಗುವಂತೆ ವಿಜಯಪುರ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಇದರೊಂದಿಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
C News TV Kannada News Online in cnewstv