ಶಿವಮೊಗ್ಗ: ತೈಲ ಬೆಲೆ ಹೆಚ್ಚಳ ಹಾಗೂ ಟೋಲ್ ಶುಲ್ಕ ಹೆಚ್ಚಳ ಖಂಡಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಎಜೆಂಟರುಗಳು ಕರೆ ನೀಡಿರುವ ಲಾರಿ ಮುಷ್ಕರಕ್ಕೆ ಶಿವಮೊಗ್ಗದಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿವೆ. ಮುಷ್ಕರ ಬೆಂಬಲಿಸಿ ಯಾವುದೇ ಲಾರಿಗಳು ಇಂದು ರಸ್ತೆಗೆ ಇಳಿದಿಲ್ಲ. ಸರಕು-ಸಾಗಣೆ ಸ್ಥಗಿತಗೊಳಿಸಿ ಲಾರಿ ಮಾಲೀಕರು ಒಂದು ದಿನದ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.
ಮುಷ್ಕರದಿಂದಾಗಿ ಶಿವಮೊಗ್ಗ ನಗರದ ಸುಮಾರು 2 ಸಾವಿರಕ್ಕೂ ಅಧಿಕ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ. ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಇರುವ ಗೂಡ್ಸ್ ಶೆಡ್ ನಲ್ಲೇ ಸುಮಾರು 200ಕ್ಕೂ ಹೆಚ್ಚು ಲಾರಿಗಳು ನಿಂತಿರುವುದು ಬಂದ್ ಎಷ್ಟು ಯಶಸ್ವಿಯಾಗಿದೆ ಎಂಬುದಕ್ಕೆ ಉದಾಹರಣೆಯಾಗಿದೆ. ತೈಲಬೆಲೆ, ಟೋಲ್ ಶುಲ್ಕ, ವಿಮೆ ಹಣ ಕಡಿತಗೊಳಿಸುವಂತೆ ಲಾರಿ ಮಾಲೀಕರು ಕೇಂದ್ರಸರ್ಕಾರವನ್ನು ಒತ್ತಾಯಿಸಿದ್ದಾರೆ.
Recent Comments