ಶಿವಮೊಗ್ಗ : ತೈಲಬೆಲೆ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ನಡೆಸುತ್ತಿರುವ ಲಾರಿ ಮುಷ್ಕರವನ್ನು ಹಿಂಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ.
ಅದರೆ, ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡೋದು ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರ ಬೆಲೆಯನ್ನು ಎಷ್ಟು ಕಡಿಮೆ ಮಾಡ್ಬೇಕೋ ಅಷ್ಟು ಕಡಿಮೆ ಮಾಡುತ್ತೇ. ಮುಷ್ಕರ ಮಾಡೋದ್ರಿಂದ ನಿಮಗೆ ಮಾತ್ರವಲ್ಲದೆ, ರೈತರು, ಕೈಗಾರಿಕೆಗಳು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತೇ. ಮುಷ್ಕರವೇ ಎಲ್ಲದಕ್ಕೂ ಪರಿಹಾರವಲ್ಲ. ನಾನು ನಿಮಗೆ ಪ್ರಾರ್ಥನೆ ಮಾಡ್ತೇನೆ. ತಕ್ಷಣವೇ ಮುಷ್ಕರವನ್ನು ನಿಲ್ಲಿಸಬೇಕು ಎಂದು ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.