ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮ ದಿನದ ಅಂಗವಾಗಿ ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ಅಭಿಮಾನಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ರವೀಂದ್ರ ನಗರ ಗಣಪತಿ ದೇವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ನೇತೃತ್ವದಲ್ಲಿ ಆಗಮಿಸಿದ ಯಡಿಯೂರಪ್ಪ ಅವರ ಅಭಿಮಾನಿಗಳು ಯಡಿಯೂರಪ್ಪ ಅವರಿಗೆ ಒಳಿತಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರಿಗೆ ಆರೋಗ್ಯ ಆಯಸ್ಸು ಕರುಣಿಸು ಹಾಗೂ ಇನ್ನಷ್ಟ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿಯನ್ನು ಬಲಮುರಿ ಗಣಪತಿ ಕರುಣಿಸಲಿ ಎಂದು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
