ಶಿವಮೊಗ್ಗ : ಕೆಲಸ ಮಾಡಿಕೊಡುವ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರಬಹುದು ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಕಚೇರಿಯಿಂದ ಮಹಾವೀರ ವೃತ್ತದ ವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಮೇಶ್ ಜಾರಕಿಹೊಳಿ ಫೋಟೋಗೆ ಚಪ್ಪಲಿ ಏಟು ಕೊಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್, ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್ , ಯಮುನಾ ರಂಗೇಗೌಡ, ಕೆ. ರಂಗನಾಥ್, ಪ್ರವೀಣ್ ಉಪಸ್ಥಿತರಿದ್ದರು.
Recent Comments