ಶಿವಮೊಗ್ಗ : ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್‍ನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಫೆಬ್ರವರಿ 28ರಂದು ನಡೆದ ಕಬಡ್ಡಿ ಪಂದ್ಯಾವಳಿಯ ಫೈನಲ್ ಮ್ಯಾಚ್‍ನ ಬಳಿಕ ಗಲಾಟೆಯಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಶಾಸಕ ಸಂಗಮೇಶ್ವರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣ ಸಂಬಂಧ ಈತನಕ ಸುಮಾರು 15 ಮಂದಿಯನ್ನು ಬಂಧಿಸಲಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಸವೇಶ್ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
Recent Comments