ಶಿವಮೊಗ್ಗದಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ.
ಶಿವಮೊಗ್ಗ ಮತ್ತು ಮೈಸೂರಿನಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಸಂಸ್ಥೆ ಮಾದರಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕ್ರಮವಾಗಿ 384 ಕೋಟಿ ರೂ. ಮತ್ತು 220 ಕೋಟಿ ರೂ.ಗಳ ನೀಡಲಾಗಿದೆ. ಶೀಘ್ರವಾಗಿ ಕಾರ್ಯಾಚರಣೆ ಮಾಡಲಾಗುತ್ತದೆ.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡುಗು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ತೀವ್ರಗೊಳಿಸಲು ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಿಸಲು ಗ್ರಾಮಬಂಧ ಸೇತುವೆ ಯೋಜನೆ ಅಡಿ 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ. ಇದಕ್ಕಾಗಿ ಎರಡು ಕೋಟಿ ರೂ. ನಿಗದಿ. ಪಶುವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಗಳ ಅಳವಡಿಕೆ ಉತ್ತೇಜಿಸಲು ಈ ಕೇಂದ್ರ ಸ್ಥಾಪನೆ.
ಶಿವಮೊಗ್ಗ – ಸವಳಂಗ – ಶಿಕಾರಿಪುರ – ಶಿರಾಳಕೊಪ್ಪ ಮಾರ್ಗದಲ್ಲಿ ಅತ್ಯಾಧುನಿಕ ಸಂಚಾರ ವ್ಯವಸ್ಥೆ, ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‍ಮೆಂಟ್ ಸಿಸ್ಟಮ್ ಮತ್ತು ಸೇಫ್ಟಿ ಸಲ್ಯೂಷನ್ಸ್ ಪ್ರಾಯೋಗಿಕವಾಗಿ ಆರಂಭ. ವೈಜ್ಞಾನಿಕ ಸಂಚಾರ ನಿರ್ವಹಣಾ ವ್ಯವಸ್ಥೆಯಡಿ ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಈ ಯೋಜನೆ ಆರಂಭಿಸಲಾಗುತ್ತಿದೆ.
Recent Comments