Breaking News

ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ

 

ಬೆಂಗಳೂರು : ಸಿ.ಡಿ ಪ್ರಕರಣದಲ್ಲಿ ಸಿಕ್ಕಿಕೊಂಡಿರುವ ಅತೃಪ್ತ ಶಾಸಕ ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ಕೂಡಲೆ ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ಅನೀತಿ ಮತ್ತು ಅಧರ್ಮ ರಾಜಕಾರಣದ ವಿರುದ್ಧ ಇಂದು ಬೆಳಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು

ಪ್ರತಿಭಟನೆ ನೇತೃತ್ವವನ್ನು ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಪಿ ಗಿರೀಶ್ ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಈಟಿ ನಿತಿನ್, ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳಾದ ಕುಮಾರೇಶ್, ಉಮೇಶ್ ಬಾಳೆಗುಂಡಿ, ಅರುಣ್ ನವುಲೆ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

*