ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಇಂದು ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು. ರಾಜ್ಯ ತಲೆತಗ್ಗಿಸುವಂತೆ ಕೆಲಸ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಡಿದ್ದಾರೆ. ಅತ್ಯಾಚಾರಿ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ ನಗರದ ಗೋಪಿವೃತ್ತದಿಂದ ಮಹಾವೀರ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ , ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ,ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ಗೌಡ, ಗ್ರಾಮಾಂತರ ಅಧ್ಯಕ್ಷ ಮನು ಹಾಗೂ ನೂರಾರು ಜನ ಕಾರ್ಯಕರ್ತರು ಭಾಗವಹಿಸಿ ಆರೋಪಿಯನ್ನು ಬಂಧಿಸಲು ಆಗ್ರಹಿಸಿದರು.
C News TV Kannada News Online in cnewstv