Breaking News

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

 

ಶಿವಮೊಗ್ಗ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಒಂದು ವಾರದ ಅವಧಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲಿಸುವುದು ಸೇರಿದಂತೆ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಲ್ಲಿ ಪಾಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯAತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದ ಗ್ರಾಹಕರೊಂದಿಗೆ ವ್ಯವಹಿಸದೆ ಮಾಸ್ಕ್ ಧರಿಸುವಂತೆ ಒತ್ತಾಯಿಸಬೇಕು ಎಂದು ಅವರು ಹೇಳಿದರು.

ಕೋವಿಡ್ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳನ್ನು ನಡೆಸುವ ಭರವಸೆಯೊಂದಿಗೆ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ, ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಲವು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಒಟ್ಟು 1016 ಉಲ್ಲಂಘನೆ ಪ್ರಕರಣಗಳಲ್ಲಿ 1.63ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

*