ಶಿವಮೊಗ್ಗ : ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ತಪಾಸಣಾ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 2200 ಮಂದಿಯ ಕರೋನಾ ತಪಾಸಣೆ ನಡೆಸಲಾಗುತ್ತಿದ್ದು, ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ನೆರೆಯ ಜಿಲ್ಲೆಗಳಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ ಮಾತ್ರ ಕರೋನಾ ನಿಯಂತ್ರಣದಲ್ಲಿಡಬಹುದಾಗಿದೆ. ಜನರು ನಿರ್ಲಕ್ಷö್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸಂಕಷ್ಟವನ್ನು ಎದುರಿಸಬೇಕಾಗಬಹುದು.
ಜಿಲ್ಲೆಯಲ್ಲಿ ಇದುವರೆಗೆ 18041 (ಶೇ.85) ಆರೋಗ್ಯ ಕಾರ್ಯಕರ್ತೆಯರಿಗೆ ಪ್ರಥಮ ಡೋಸ್ ಹಾಗೂ ಶೇ.53ರಷ್ಟು ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಶೇ.63ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್, 60ವರ್ಷ ಮೇಲ್ಪಟ್ಟ 58814 ಮಂದಿಗೆ ಹಾಗೂ 45ವರ್ಷ ಮೇಲ್ಪಟ್ಟ 1470 ಮಂದಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಗೆ 11560 ಕೋವ್ಯಾಕ್ಸಿನ್ ಸರಬರಾಜಾಗಿದ್ದು 4200 ಖರ್ಚಾಗಿದೆ. 128000 ಕೋವಿಶೀಲ್ಡ್ ಸರಬರಾಜಗಿದ್ದು 91904 ಬಳಕೆಯಾಗಿದೆ. ಒಟ್ಟು 173 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಉಪಕೇಂದ್ರಗಳು, ಪಿಎಚ್‌ಸಿ, ಸಿಎಚ್‌ಸಿ, ತಾಲೂಕು ಆಸ್ಪತ್ರೆ, ಶಿಮ್ಸ್, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಮ್ಮ ಗುರುತಿನ ಚೀಟಿಯೊಂದಿಗೆ ತೆರಳಿ ಲಸಿಕೆ ಪಡೆದುಕೊಳ್ಳಬಹುದು.
ಪ್ರಸ್ತುತು ಕೋವಿಡ್ ಪ್ರಕರಣಗಳನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಸಜ್ಜಿತ ಐಸಿಯು, 11ಸಾವಿರ ಕೆಎಲ್ ಆಕ್ಸಿಜನ್ ಘಟಕ ಮಾತ್ರವಲ್ಲದೆ ಹೆಚ್ಚುವರಿಯಾಗಿ 6ಸಾವಿರ ಕೆಎಲ್ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಎಪಿಎಂಸಿಯAತಹ ಸ್ಥಳಗಳಲ್ಲಿ ರ‍್ಯಾಂಡಮ್ ಆಗಿ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ.
Recent Comments