Breaking News

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು

 

ಶಿವಮೊಗ್ಗ : ಛತ್ತೀಸಘಡದ ಸುಕ್ಮಾ-ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಡೆದ ನಕ್ಸಲ್ ದಾಳಿಗೆ ಹುತಾತ್ಮರಾದ 22 ವೀರ ಯೋಧರಿಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಶಿವಪ್ಪನಾಯಕ ಪ್ರತಿಮೆ ಬಳಿ ಶ್ರದ್ಧಾಂಜಲಿ ಸಲ್ಲಿಸಿದ NSUI ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾವಿಜಯಕುಮಾರ್ ,ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ. ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ಗೌಡ, ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ವಿನಯ್ ಹಾಗೂ ನೂರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

Leave a Reply

Your email address will not be published. Required fields are marked *

*